ವೀರಶೈವ ಲಿಂಗಾಯತ ಸಮುದಾಯದವನ್ನು ಕೇಂದ್ರ ಸರ್ಕಾರ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾಶಿವಾನಂದ ಅಂಬಡಗಟ್ಟಿ ಆಗ್ರಹಿಸಿದರು.

ಧಾರವಾಡ: ವೀರಶೈವ ಲಿಂಗಾಯತ ಸಮುದಾಯದವನ್ನು ಕೇಂದ್ರ ಸರ್ಕಾರ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ
ಶಿವಾನಂದ ಅಂಬಡಗಟ್ಟಿ ಆಗ್ರಹಿಸಿದರು.
ಈ ಕುರಿತು ರಾಜ್ಯ ಘಟಕ ಹಾಗೂ ರಾಷ್ಟ್ರೀಯ ಘಟಕದ ವತಿಯಿಂದ ಅಗಸ್ಟ್ 1 ರಂದು  ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಅದರಂತೆ ಧಾರವಾಡದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಿದರು.

ಧಾರವಾಡದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವೀರಶೈವ ಲಿಂಗಾಯತ ಸಮುದಾಯದ ಜನರು ಬಹುತೇಕ ಕೃಷಿ ಮತ್ತು ಕೃಷಿ ಆಧಾರಿತ ಕಸುಬುಗಳನ್ನು ಅವಲಂಬಿಸಿದ್ದು ಆರ್ಥಿಕವಾಗಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯವಾಗಿದೆ ಎಂದು ತಿಳಿಸಿದರು.
ವೀರಶೈವ ಲಿಂಗಾಯತ ಸಮುದಾಯವನ್ನು ಬಹುದಿನದಿಂದ ಓಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡಬೇಕು ಎಂದು ಒತ್ತಾಯವಾಗಿದೆ ಎಂದು ತಿಳಿಸಿದರು 

ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ, ರಾಜ್ಯ ಉಪಾಧ್ಯಕ್ಷ ರುದ್ರಣ್ಣ ಹೊರಕೇರಿ, ರಾಜೇಂದ್ರ ಕಪಲಿ ಸೇರಿದಂತೆ ಹಲವರು ಇದ್ದರು.
ನವೀನ ಹಳೆಯದು

نموذج الاتصال