ಇಂದು ನವನಗರದ ಪಾಲಿಕೆಯ ಜಾಗದಲ್ಲಿ ಮಹಾನಗರದ ನಾಗರಿಕರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 25 ಲಕ್ಷ ಸಾಮರ್ಥ್ಯದ ಕುಡಿಯುವ ನೀರಿನ ಟ್ಯಾಂಕ್ ಗಳನ್ನು ಕಟ್ಟಲು, ಮಹಾನಗರ ಪಾಲಿಕೆಯ ಸದಸ್ಯರು, ಮಹಾನಗರ ಪಾಲಿಕೆಯ ಅಧಿಕಾರಿಗಳು, ಹಾಗೂ ಎಲ್&ಟಿ ಅಧಿಕಾರಿಗಳೊಂದಿಗೆ
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರು ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಉಪ ಮಹಾಪೌರರಾದ ಶ್ರೀಮತಿ ಉಮಾ ಮುಕುಂದ ರವರು,
ಪಾಲಿಕೆಯ ಸಭಾನಾಯಕರಾದ ಶ್ರೀ ತಿಪ್ಪಣ್ಣ ಮಜ್ಜಿಗಿ ರವರು, ಪಾಲಿಕೆಯ ಆಯುಕ್ತರಾದ ಶ್ರೀ ಗೋಪಾಲಕೃಷ್ಣ ರವರು,
ಪಾಲಿಕೆಯ ಸದಸ್ಯರಾದ ಶ್ರೀಮತಿ ಸುನೀತಾ ಮಾಳವಡಕರ ರವರು, ಪಾಲಿಕೆಯ ಸಹಾಯಕ ಆಯುಕ್ತರಾದ ಶ್ರೀ ರಮೇಶ ನೂಲ್ವಿ ರವರು, ಎಲ್&ಟಿ ಅಧಿಕಾರಿಗಳು ಉಪಸ್ಥಿತರಿದ್ದರು.