ಜೀತದಂತಹ ಅನಿಷ್ಠ ಪದ್ಧತಿಗಳ ನಿವಾರಣೆಗೆ ಕಾರಣಿಭೂತರು ಡಿ.ದೇವರಾಜ ಅರಸು*

*ಜೀತದಂತಹ ಅನಿಷ್ಠ ಪದ್ಧತಿಗಳ ನಿವಾರಣೆಗೆ ಕಾರಣಿಭೂತರು ಡಿ.ದೇವರಾಜ ಅರಸು*
-*ಹಿರಿಯ ನ್ಯಾಯವಾದಿ ಲೋಹಿತ ನಾಯ್ಕರ್*
*ಧಾರವಾಡ(ಕರ್ನಾಟಕ ವಾರ್ತೆ)ಆ.22*: ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರು ರೈತಪರ, ಜನಪರ, ಹಿಂದುಳಿದ ವರ್ಗಗಳ ಧ್ವನಿಯಾಗಿದ್ದರು. ಮಲ ಹೊರುವ ಪದ್ದತಿ, ಜೀತ ಪದ್ದತಿಗಳ ನಿವಾರಣೆಗೆ ದಿಟ್ಟ ಹೆಜ್ಜೆಯನಿಟ್ಟರು ಎಂದು ಹಿರಿಯ ನ್ಯಾಯವಾದಿ ಲೋಹಿತ ನಾಯ್ಕರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರ 107 ನೇ ಜಯಂತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.
ವ್ಯಕ್ತಿ-ಶಕ್ತಿಯಾಗಿ ರೂಪುಗೊಂಡಿದ್ದ ಅರಸು ಅವರು ತತ್ವಸಿದ್ಧಾಂತಕ್ಕೆ ಬದ್ಧರಾಗಿದ್ದರು. ಉಳುವವನೇ ಭೂಮಿಯ ಒಡೆಯ ಯೋಜನೆಯನ್ನು ಜಾರಿಗೆ ತರುವುದರ ಮೂಲಕ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬಂತೆ ಭೂಮಿಯ ಹಕ್ಕನ್ನು ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣಾಭಿವೃದ್ಧಿಗೆ ಅರಸು ಅವರ ಕೊಡುಗೆ ಅಪಾರವಾಗಿದೆ. ಕನಿಷ್ಠ ವೇತನ ಪದ್ದತಿ, ಹಿಂದುಳಿದ ವರ್ಗದವರಿಗೆ ಸರಕಾರಿ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸುವುದರೊಂದಿಗೆ ಹಿಂದುಳಿದ ಸಮಾಜವನ್ನು ಮುಂದೆ ತರಲು ಶ್ರಮಿಸಿದರು. ಇದು ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗಳು ಮುಖ್ಯವಾಹಿನಿಗೆ ಬರಲು ಸಾಧ್ಯವಾಯಿತು ಎಂದರು.
ಅಬಕಾರಿ ಇಲಾಖೆಯ ಉಪ ಆಯುಕ್ತೆ ಶಾರದಾ ಕೋಲಕಾರ ಮಾತನಾಡಿ, ಅರಸು ಅವರು ಸಮಾಜದ ಏಳ್ಗೆಗಾಗಿ, ಸಮಾಜದ ಸಮಾನತೆಗಾಗಿ ಹಲವು ಸಾಮಾಜಿಕ ಹಾಗೂ ಆರ್ಥಿಕ ಸುಧಾರಣೆಯನ್ನು ತಂದಿದ್ದಾರೆ. ಅವರು ನೀಡಿರುವ ಯೋಜನೆಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು. ಬಡ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಬಾರದು ಎಂದರು.

ವಸ್ತು ಪ್ರದರ್ಶನ ಮಳಿಗೆಯ ವಸ್ತು ಪ್ರದರ್ಶಕರಿಗೆ ಹಾಗೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಇಂಧುಧರ ಮುತ್ತಳ್ಳಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕಿ ಜಯಶ್ರೀ ಹಿರೇಮಠ, ಜಿಲ್ಲಾ ಹಿಂದುಳಿದ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸರೋಜಾ ಹಳಕಟ್ಟಿ, ವಿವಿಧ ತಾಲ್ಲೂಕೂಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಾದ ಎಫ್.ಎಂ.ರೇಶ್ಮಿ, ಗೀತಾ ಬಿಳಗಿ, ನಾಗರತ್ನ ಕ್ಯಾಸನೂರ, ಜಯಶ್ರೀ ಹಂಡೇಗಾರ ವೇದಿಕೆಯ ಮೇಲಿದ್ದರು.

ಪೂಜಾ ಸಿ.ಬಿ ಪ್ರಾರ್ಥಿಸಿದರು. ಶೈಲಾ ರಾಠೋಡ ದೇಶಭಕ್ತಿ ಗೀತೆ ಪ್ರಸ್ತುತಪಡಿಸಿದರು. ಹುಬ್ಬಳ್ಳಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸುರೇಶ ಗುರಣ್ಣವರ ನಿರೂಪಿಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕಿ ಗೀತಾ ಹೂಗಾರ ವಂದಿಸಿದರು.


*ಎರಡನೆಯ ದಿನದ ಕಾರ್ಯಕ್ರಮ*: 
ಡಿ.ದೇವರಾಜ ಅರಸರ 107ನೇ ಜಯಂತಿಯ ಎರಡನೆಯ ದಿನದ ಕಾರ್ಯಕ್ರಮಕ್ಕೆ ವಿಶೇಷ ಅವ್ವಾನಿತರಾಗಿ ಆಗಮಿಸಿದ್ದ ಪೆÇ್ರಬೆಷನರಿ ಉಪವಿಭಾಗಾಧಿಕಾರಿ ಅನುರಾಧ ವಸ್ತ್ರದ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ತಯಾರಿಯ ಬಗ್ಗೆ ಮಾತನಾಡಿದರು. ಹಾಗೂ ಕೆ.ಎ.ಎಸ್ ಪರೀಕ್ಷೆಯನ್ನು ಹೇಗೆ ಎದುರಿಸುವುದು ಎಂಬುದನ್ನು ತಿಳಿಸಿದರು.

 ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸರೋಜಾ ಹಳಕಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ವಸತಿ ನಿಲಯದಲ್ಲಿಯ ಸೌಲಭ್ಯಗಳ ಸದುಪಯೋಗ ಮಾಡಿಕೊಳ್ಳುವ ಕುರಿತು ವಿವರಿಸಿ ವಸತಿನಿಲಯದದಲ್ಲಿ ನಡೆಸುತ್ತಿರುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಪೋಕನ್ ಇಂಗ್ಲೀμï ಕ್ಲಾಸ್ ಹಾಗೂ ಕರಾಟೆ ಕ್ಲಾಸಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ನಂತರ ಜಿಲ್ಲೆಯ ವಿವಿಧ ವಸತಿ ನಿಲಯಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲೂಕಿನಿಂದ ಆಗಮಿಸಿದ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ಉಪಸ್ಥಿತರಿದ್ದರ. ಇಂದೂಧರ್ ಮುತ್ತಳ್ಳಿ ನಿರೂಪಿಸಿದರು. ರಾಮಯ್ಯ ಪೂಜಾರ್ ಸ್ವಾಗತಿಸಿದರು. ಗೀತಾ ಹೂಗಾರ್ ವಂದಿಸಿದರು.

**************
ನವೀನ ಹಳೆಯದು

نموذج الاتصال