ಧಾರವಾಡ ಕೃಷಿಮೇಳ ದಿ.17 ರಿಂದ 20 ರ ವರೆಗೆ.
ಧಾರವಾಡ : ಇಲ್ಲಿಯ- ಕೃಷಿ ವಿಶ್ವವಿದ್ಯಾಲಯವು 35. ವಸಂತಗಳನ್ನು ಮುಗಿಸುವ ಹಂತದಲ್ಲಿದ್ದು , ಪ್ರತಿ ವರ್ಷದಂತೆ ಈ ವರ್ಷವು ಕೃಷಿಮೇಳವನ್ನು 2022 ರ ಸೆಪ್ಟೆಂಬರ್ 17 ರಿಂದ 20 ರ ವರೆಗೆ “ ರೈತರ ಆದಾಯ ದ್ವಿಗೊಳಿಸಲು ಕೃಷಿ ತಾಂತ್ರಿಕತೆಗಳು " ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗುತ್ತಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್.ಬಸವರಾಜಪ್ಪ ಇಂದಿಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 18 ರ ಬೆಳಿಗ್ಗೆ 11 ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕೇಂದ್ರ ಸಚವರಾದ ಪ್ರಲ್ಹಾದ ಜೋಶಿ ಉಪಸ್ಥಿತರಿರುವರು, ಕೃಷಿ ಸಚಿವರಾದ ಬಿ.ಸಿ.ಪಾಟೀಲ ಕೃಷಿ ಪ್ರಕಟಣೆಗಳನ್ನು ಬಿಡುಗಡೆ ಮಾಡಲಿದ್ದು, ಅಧ್ಯಕ್ಷತೆಯನ್ನು ಶಾಸಕ ಅಮೃತ ದೇಸಾಯಿ ವಹಿಸಲಿದ್ದು, ರಾಜ್ಯದ ಹಲವಾರು ಸಚಿವರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು.
ಈ ಮೇಳದಲ್ಲಿ ಕೃಷಿ ಹಾಗೂ ಕೃಷಿ ಪೂರಕ ತಂತ್ರಜ್ಞಾನಗಳೊಂದಿಗೆ ಬೀಜ ಮೇಳ ಮತ್ತು ಮತ್ತು ಮೇಳದ ಪ್ರದರ್ಶನಗಳೊಂದಿಗೆ ಆಯೋಜಿಸಲಾಗಿದೆ . ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಆವರಣಗಳಲ್ಲಿ ಕೈಗೊಂಡ ಭೋಧನೆ , ಸಂಶೋಧನೆ ಹಾಗೂ ವಿಸ್ತರಣಾ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ರೈತ ಸಮುದಾಯಕ್ಕೆ ಒದಗಿಸಲಾಗುವುದು , ಅಲ್ಲದೇ , ವಿಶ್ವವಿದ್ಯಾಲಯದಿಂದ ಬಿಡುಗಡೆಯಾದ ಮತ್ತು ಬಿಡುಗಡೆಯ ಹಂತದಲ್ಲಿರುವ ತಂತ್ರಜ್ಞಾನಗಳ ಬಗ್ಗೆ ರೈತರಿಗೆ ಕ್ಷೇತ್ರ ಪ್ರಯೋಗ ಹಾಗೂ ವಿವಿಧ ಪ್ರಾತ್ಯಕ್ಷಿಕೆಗಳ ಮೂಲಕ ಮನದಟ್ಟಾಗುವ ರೀತಿಯಲ್ಲಿ ನಿಯೋಜಿಸಲಾಗಿದೆ ಎಂದರು
ಒಟ್ಟಾರೆಯಾಗಿ ಎಲ್ಲ ಕೃಷಿ ತಂತ್ರಜ್ಞಾನಗಳ ಮಾಹಿತಿಯನ್ನು ನಾಲ್ಕು ದಿನಗಳ ಕಾಲ ಆಯೋಜಿಸಿರುವ ಕೃಷಿ ಮೇಳದ ಮುಖಾಂತರ ಅಲ್ಪ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರಿಗೆ ತಲುಪಿಸುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ . ನಾಲ್ಕು ದಿನಗಳ ಈ ಮೇಳದಲ್ಲಿ ಸುಮಾರು 10 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ದ್ವಿದಳ ಧಾನ್ಯಗಳ ಉತ್ಪಾದನೆ ಹಾಗೂ ಮೌಲ್ಯವರ್ಧನೆ * ಸುಧಾರಿತ ತಳಿ ಬೀಜ , ಸಸಿ ಹಾಗೂ ಕೃಷಿ ಪ್ರಕಟಣೆಗಳ ಮಾರಾಟ ಸುಧಾರಿತ ಕೃಷಿ ಯಂತ್ರೋಪಕರಣ ಹಾಗೂ ಸಲಕರಣೆಗಳ ಬಳಕೆ . ರೈತರ ಆವಿಷ್ಕಾರಗಳು ಮತ್ತು ಕೃಷಿ ತಜ್ಞರೊಂದಿಗೆ ಸಂವಾದ - ಹೈಟೆಕ್ ತೋಟಗಾರಿಕೆ , ಮಣ್ಣು ರಹಿತ ಬೇಸಾಯ , ಸುಗಂಧ ಮತ್ತು ಔಷಧಿ ಬೆಳೆಗಳು ಹಾಗೂ ಫಲ ಪುಷ್ಪಗಳ ಪ್ರದರ್ಶನ ಅಧಿಕ ಇಳುವರಿ ಮತ್ತು ನೀರಿನ ಉಳಿತಾಯಕ್ಕಾಗಿ ಸುಧಾರಿತ ನೀರಾವರಿ ಪದ್ಧತಿಗಳು
ಸಂಪನ್ಮೂಲ ಸಂರಕ್ಷಣೆಗಾಗಿ ಸಮಗ್ರ ಜಲಾನಯನ ಅಭಿವೃದ್ಧಿ ರೈತರ ಸಬಲೀಕರಣಕ್ಕೆ ಸಮಗ್ರ ಕೃಷಿ ಪದ್ಧತಿ ಒಣ ಬೇಸಾಯ ತಾಂತ್ರಿಕತೆಗಳಿಂದ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು ಮಣ್ಣಿನ ಫಲವತ್ತತೆ ಹಾಗೂ ಆರೋಗ್ಯ ಸಂರಕ್ಷಣೆ , ಸವಳು ಮತ್ತು ಜವಳು ಭೂಮಿಗಳ ಸುಧಾರಣೆ ಸಮಗ್ರ ಬೆಳೆ , ಪೋಷಕಾಂಶ ಹಾಗೂ ನೀಡೆಗಳ ನಿರ್ವಹಣೆ ಇತ್ಯಾದಿಗಳನ್ನು ಪ್ರದರ್ಶಗಳ ಮುಖಾಂತರ ಮಾಹಿತಿಯಯ ನೀಡಲಾಗುತ್ತಿದೆ ಎಂದರು.
ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ 7 ಜಿಲ್ಲೆಯಲ್ಲಿ ಆಯ್ಕೆಯಾದ ಶ್ರೇಷ್ಠ ಕೃಷಿಕ, ಶ್ರೇಷ್ಠ ಕೃಷಿ ಮಹಿಳೆ ಎಂಬ ಪ್ರಶಸ್ತಿಯನ್ನು ಕೊಡಲಾಗುತ್ತಿದೆ ಎಂದರು.
ಈ ಬಾರಿ ಪ್ರಥಮವಾಗಿ ಕೃಷಿ ಚಟುಚಟಿಕೆ ಕುರಿತು ಕೃತಿ ಬರೆದವರಿಗೆ ಖ್ಯಾತ ಕವಿ ದಿ.ಚನ್ನವೀರ ಕಣವಿ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ . ಒಟ್ಟು 660 ಮಳಿಗೆಗಳು ನಿಮಿ೯ಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಸ್ತರಣಾ ನಿರ್ದೇಶಕ ಡಾ.ಪಿ.ಎಸ್.ಹೂಗಾರ, ಸಂಶೋಧನಾ ನಿರ್ದೇಶಕ ಡಾ.ಪಿ.ಎಲ್. ಪಾಟೀಲ ಸೇರಿದಂತೆ ವಿವಿಧ ವಿಭಾಗದ ಡೀನ್. ಮುಖ್ಯಸ್ಥರು ಉಪಸ್ಥಿತರಿದ್ದರು.