ಸ್ವಯಂ ಪ್ರೇರಿತರಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ವಾಣಿಜ್ಯ ಕಟ್ಟಡಗಳ ಮೇಲೆ ಕನ್ನಡ ಧ್ವಜ ಹಾರಿಸಲು ಮೇಯರ ಈರೇಶ ಅಂಚಟಗೇರಿ ಅವರಿಂದ ವಿನಮ್ರ ಮನವಿ

ಸ್ವಯಂ ಪ್ರೇರಿತರಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ವಾಣಿಜ್ಯ ಕಟ್ಟಡಗಳ ಮೇಲೆ ಕನ್ನಡ ಧ್ವಜ ಹಾರಿಸಲು ಮೇಯರ ಈರೇಶ ಅಂಚಟಗೇರಿ ಅವರಿಂದ ವಿನಮ್ರ ಮನವಿ
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಅಂಗವಾಗಿ ಇಂದು ಹುಬ್ಬಳ್ಳಿಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ವಿಶೇಷ ಸಭೆ ಮಹಾನಗರ ಪಾಲಿಕೆ ಹಿರಿಯ ಸದಸ್ಯರು ನೇತೃತ್ವದಲ್ಲಿ ಪೂರ್ವಭಾವಿ ಸಭೆ ಜರುಗಿತು.
ಈ ಸಂದರ್ಭದಲ್ಲಿ ಸ್ವಯಂಪ್ರೇರಿತರಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾಣಿಜ್ಯ ಕಟ್ಟಡಗಳ ಮೇಲೆ ಕರ್ನಾಟಕದ
 ಹೆಮ್ಮೆಯ ಕನ್ನಡ ಧ್ವಜವನ್ನು ಹಾರಿಸಲು ಮಹಾಪೌರರು ಈರೇಶ ಅಂಚಟಗೇರಿ ಮನವಿ ಮಾಡಿದರು ಹಾಗು ಮಹಾನಗರ ಪಾಲಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಿಸಲು ಮಹಾನಗರ ಪಾಲಿಕೆ ಹಿರಿಯ ಸದಸ್ಯರ ನೇತೃತ್ವದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದ್ದು ವಿಶೇಷವಾಗಿ ಮೆರವಣಿಗೆ ಆಯೋಜನೆ ಹಾಗು ಇನ್ನಿತರ ತಂಡಗಳನ್ನು ಹಿರಿಯ ಸದಸ್ಯರ ನೇತೃತ್ವದಲ್ಲಿ ನಿಯೋಜಿಸಲಾಗಿದ್ದು 
ಸರ್ವರು ಕರ್ನಾಟಕ ರಾಜ್ಯೋತ್ಸವ ರಾಜ್ಯದಲ್ಲೆ ಮಾದರಿ ರಾಜ್ಯೋತ್ಸವ ಆಚರಣೆ ಮಾಡಲು ಸಮಸ್ತರು ಸಲಹೆ ಸೂಚನೆಗಳನ್ನು ನೀಡಿದರು..
ಎಲ್ಲಾ ತರಹದ ಲೈಸೆನ್ಸ್ ಹೊಂದಿರುವ ವಾಣಿಜ್ಯ ಕಟ್ಟಡಗಳು ಕನ್ನಡ ಧ್ವಜಗಳನ್ನು ಸ್ವಯಂ ಪ್ರೇರಿತರಾಗಿ ಹಾರಿಸಿ ಮಹಾನಗರ ಪಾಲಿಕೆಯ ವತಿಯಿಂದ ಜರುಗುತ್ತಿರುವ ಕರ್ನಾಟಕ ರಾಜ್ಯೊತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ಮಹಾಪೌರರು ಈರೇಶ ಅಂಚಟಗೇರಿ ಸರ್ವರಿಗು ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಆಯುಕ್ತರು ವಲಯ ಅಯುಕ್ತರು ಸಭಾ ನಾಯಕರು ವಿರೋಧ ಪಕ್ಷದ ನಾಯಕರು ಹಾಗು ಮಹಾನಗರ ಪಾಲಿಕೆ ಹಿರಿಯ ಸದಸ್ಯರು ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು
ನವೀನ ಹಳೆಯದು

نموذج الاتصال