ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಕನ್ಸಲ್ಟಿಂಗ್ ಇಂಜಿನಿಯರ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ಇಂದು ಧಾರವಾಡದ ಆಲೂರು ವೆಂಕಟರಾವ ಸಭಾಭವನದಲ್ಲಿ ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರ ನೇತೃತ್ವದಲ್ಲಿ ಸಮನ್ವಯ ಸಭೆ ನೆರವೇರಿತು.
ಈ ಸಂದರ್ಭದಲ್ಲಿ ನೂತನ ಕಟ್ಟಡ ನಿರ್ಮಾಣ ನೀತಿಯಲ್ಲಿರುವ ನ್ಯೂನತೆಗಳ ಬಗ್ಗೆ ಅಸೋಸಿಯೇಷನ್ ನ ಸದಸ್ಯರು ಮಹಾಪೌರರು, ಮಹಾನಗರ ಪಾಲಿಕೆಯ ಅಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಮಹಾಪೌರರು ನ್ಯೂನತೆಗಳನ್ನು ಸರಿಪಡಿಸಲು ಸಾಮಾನ್ಯ ಸಭೆಯಲ್ಲಿ ಸರ್ವ ಪಾಲಿಕೆಯ ಸದಸ್ಯರೊಂದಿಗೆ ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಪಾಲಿಕೆಯ ಉಪ ಮಹಾಪೌರರಾದ ಉಮಾ ಮುಕುಂದ ರವರು, ಸಭಾನಾಯಕರಾದ ಶ್ರೀ ತಿಪ್ಪಣ್ಣ ಮಜ್ಜಿಗಿ ರವರು,
ವಿರೋಧಪಕ್ಷದ ನಾಯಕರಾದ ಶ್ರೀ ರಾಜರಾವ್ ಮನಕುಂಟ್ಲಾ ರವರು, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶ್ರೀ ಶಿವು ಮೆಣಸಿನಕಾಯಿ ರವತ್ತು, ಶ್ರೀ ಸುರೇಶ ಬೆದರೆ ರವರು, ಪಾಲಿಕೆಯ ಆಯುಕ್ತರಾದ ಶ್ರೀ ಗೋಪಾಲಕೃಷ್ಣ ರವರು, ಹೆಚ್ಚುವರಿ ಆಯುಕ್ತರಾದ ಶ್ರೀ ಬನಶಂಕರಿ ರವರು, ವಲಯ ಅಧಿಕಾರಿಗಳಾದ ಶ್ರೀ ಆರ್.ಎಂ. ಕುಲಕರ್ಣಿ ರವರು, ಇಂಜಿನಿಯರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.