ಧರಣಿನಿತರ ಕಬ್ಬು ಬೆಳೆಗಾರರನ್ನು ಬೇಟಿ ಮಾಡಿ, ಮನವಿ ಆಲಿಸಿದ ಸಚಿವರು*

*ಧರಣಿನಿತರ ಕಬ್ಬು ಬೆಳೆಗಾರರನ್ನು ಬೇಟಿ ಮಾಡಿ, ಮನವಿ ಆಲಿಸಿದ ಸಚಿವರು*
*ಧಾರವಾಡ(ಕರ್ನಾಟಕ ವಾರ್ತೆ)ನ.01*: ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿನಿರತ ಕಬ್ಬು ಬೆಳೆಗಾರರನ್ನು ಭೇಟಿ ಮಾಡಿ, ಮನವಿ ಸ್ವೀಕರಿಸಿದರು.
ನಂತರ ಅವರು ಮಾತನಾಡಿ, ಕಬ್ಬು ಬೆಳೆಗಾರರ ಸಮಸ್ಯೆಯನ್ನು ಮತ್ತು ಪ್ರಸಕ್ತ ಸಾಲಿಗೆ ಕಬ್ಬುದರ ನಿಗದಿ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಹಾಗೂ ಸಕ್ಕರೆ ಸಚಿವರೊಂದಿಗೆ ಚರ್ಚಿಸಿ ಪರಿಹರಿಸಲಾಗುವುದು ಎಂದು ತಿಳಿಸಿದರು .

ಶಾಸಕ ಅಮೃತ ದೇಸಾಯಿ ಮಾತನಾಡಿ, ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸರ್ಕಾರದೊಂದಿಗೆ ಮಾನ್ಯ ಸಚಿವರ ಒಡಗೂಡಿ ಚರ್ಚಿಸಿ, ದರ ನಿಗದಿ ಮಾಡುವಂತೆ ಕ್ರಮ ವಹಿಸಲಾಗುವುದೆಂದು ಹೇಳಿದರು.
ಈ ಸಂದರ್ಭದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ ಮಾತನಾಡಿ, ರೈತರ ಧರಣಿ ಹಾಗೂ ಬೇಡಿಕೆಗಳ ಕುರಿತು ಸಚಿವರ ಗಮನಸೆಳೆದರು. ಮತ್ತು ಈ ಕುರಿತು ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತ ಲಾಭೂರಾಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ, ಡಾ.ಗೋಪಾಲ ಬ್ಯಾಕೋಡ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಧಾರವಾಡ ತಹಶೀಲ್ದಾರ ಸಂತೋಷ ಹಿರೇಮಠ, ಸಹಾಯಕ ಪೊಲೀಸ್ ಆಯುಕ್ತ ವಿಜಯಕುಮಾರ ವಿ.ಟಿ. ಸೇರಿದಂತೆ ರೈತರು, ಇತರರು ಇದ್ದರು.

****************
ನವೀನ ಹಳೆಯದು

نموذج الاتصال