ಇಂದು ರಾಷ್ಟ್ರೀಯ ಯುವಜನೋತ್ಸವದ ಮುಕ್ತಾಯ ಸಮಾರಂಭಕ್ಕೆ ಆಗಮಿಸಿದ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ ಗೇಹಲೊಟ್

ಇಂದು ರಾಷ್ಟ್ರೀಯ ಯುವಜನೋತ್ಸವದ ಮುಕ್ತಾಯ ಸಮಾರಂಭಕ್ಕೆ ಆಗಮಿಸಿದ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ ಗೇಹಲೊಟ್ 
ರವರು ಹಾಗೂ ಕೇಂದ್ರ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಪ್ರಹ್ಲಾದ ಜೋಷಿ ರವರು ಕೃಷಿವಿಶ್ವವಿದ್ಯಾಲಯದ ಅತಿಥಿ ಗೃಹದಿಂದ ಕಾಲ್ನಡಿಗೆಯ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಯುವಪ್ರತಿಭೆಗಳೊಂದಿಗೆ ಮಾತನಾಡಿ ಅವರ ಕುಶಲೋಪರಿಯನ್ನು ವಿಚಾರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹಾಲಪ್ಪ ಆಚಾರ ರವರು, ಶಾಸಕರಾದ ಶ್ರೀ ಅಮೃತ ದೇಸಾಯಿ ರವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರು ಸಹ ಅವರೊಂದಿಗಿದ್ದರು.
SUBSCRIBE OUR STAR 74 NEWS CHANNEL
ನವೀನ ಹಳೆಯದು

نموذج الاتصال