ಸ್ವಾತಂತ್ರ ಹೋರಾಟಗಾರ ಮಹಾರಾಣಾಪ್ರತಾಪ ಸಿಂಹರ ಹುತಾತ್ಮ ದಿನಾಚರಣೆಯ
ಅಂಗವಾಗಿ ಇಂದು ಹುಬ್ಬಳ್ಳಿ ಹಳೇ ಕೋರ್ಟ್ ವೃತ್ತದಲ್ಲಿರುವ ಅವರ ಪುತ್ತಳಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಉಪಮಹಾಪೌರರಾದ ಶ್ರೀಮತಿ ಉಮಾ ಮುಕುಂದ ರವರು, ಪಾಲಿಕೆಯ ಆಯುಕ್ತರಾದ ಶ್ರೀ ಗೋಪಾಲಕೃಷ್ಣ ರವರು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.