ಡಾ. ಗಿರೀಶ ಕಾರ್ನಾಡ ಅವರ ಕನ್ನಡ ಸಾಹಿತ್ಯಕ್ಕೆ ಮತ್ತು ರಂಗಭೂಮಿಗೆ ನೀಡಿದ ಕೊಡುಗೆ ಎಂಬ ಉಪನ್ಯಾಸ.
ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಾಪ್ತಾಹಿಕ ಸಾಹಿತ್ಯ ಮಾಲಿಕೆ 22 ರ ಅಡಿಯಲ್ಲಿ ಕರ್ನಾಟಕ ಸಂಭ್ರಮ 50 ರ ಡಾ. ಗಿರೀಶ ಕಾರ್ನಾಡ ಅವರ ಕನ್ನಡ ಸಾಹಿತ್ಯಕ್ಕೆ ಮತ್ತು ರಂಗಭೂಮಿಗೆ ನೀಡಿದ ಕೊಡುಗೆ ಎಂಬ ಉಪನ್ಯಾಸ ಕಾರ್ಯಕ್ರಮವನ್ನು
ದಿ9 ರಂದು ಶನಿವಾರ ಸಂಜೆ 5:3೦ಕ್ಕೆ ಜಿಲ್ಲಾ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ವಿಜಯಪುರದ ಸಿಕ್ಯಾಬ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್.ಬಿ. ಖಾದಿರನಾಯಕ ಉದ್ಘಾಟನೆ ಮಾಡಲಿದ್ದು ಉಪನ್ಯಾಸಕರಾಗಿ ಯುವ ಬರಹಗಾರರು, ಗಾಯಕರಾದ ಪ್ರೇಮಾನಂದ ಶಿಂಧೆ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ ಲಿಂಗರಾಜ ಅಂಗಡಿ ಉಪಸ್ಥಿತಿ ವಹಿಸುವರು. ಅಧ್ಯಕ್ಷತೆಯನ್ನು ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹಾಂತೇಶ್ ನರೇಗಲ್ ವಹಿಸುವರು.. ಇದೇ ಸಂದರ್ಭದಲ್ಲಿ ಸುವರ್ಣ ಸುರಕೋಡ, ಡಿ ಗೀತಾ, ಮೇಘಾ ಹುಕ್ಕೇರಿ, ಉಮಾದೇವಿ ಬಾಗಲಕೋಟಿ, ಸುಧಾ ಕಬ್ಬೂರ, ಸುನಂದಾ ಯಡಾಲ, ಆರತಿ ಪಾಟೀಲ ಹಾಗೂ ಎಫ್ ಬಿ ಕಣವಿ ಅವರು ಕನ್ನಡ ನಾಡು ನುಡಿಯ ಗೀತೆಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ಗೌರವ ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾವುಗಳೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿ ಗೊಳಿಸಬೇಕು ಎಂದು ವಿನಂತಿ.