ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಿಂದುಳಿದ ವರ್ಗಗಳ ಯುವ ಮುಖಂಡರಾದ ಬಸವರಾಜ ಮಲಕಾರಿ ಮರಳಿ ಕಾಂಗ್ರೆಸ್ ಗೆ ಸೇರ್ಪಡೆ.
ಬಸವರಾಜ ಮಲಕಾರಿ ಮರಳಿ ಗೊಡಿಗೆ
ಧಾರವಾಡ:-- ಬೆಂಗಳೂರಿನ ಕೆಪಿಸಿಸಿ ಕಛೇರಿಯ ಭಾರತ ಜೋಡೋ ಸಭಾಭವನದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಬಸವರಾಜ ಮಲಕಾರಿ ಅವರನ್ನು ಹಿರಿಯ ನಾಯಕರು ಮಾಜಿ ಸಚಿವರು ಕೆಪಿಸಿಸಿ ಕಾರ್ಯಾಧ್ಯಕ್ಷರು ಶಾಸಕರಾದ ವಿನಯ ಕುಲಕರ್ಣಿ ಅವರು ಅಧಿಕಾರ ಸ್ವೀಕರಿಸುವ ದಿನದಂದೇ ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳನ್ನು ಬಲಿಷ್ಠ ಗೊಳಿಸುವ ಕೆಲಸಕ್ಕೆ ವಿನಯ ಕುಲಕರ್ಣಿ ಕೈ ಹಾಕಿದ್ದು ಕಂಡು ಬರುತ್ತಿದೆ.
ಬಸವರಾಜ .ಮಲಕಾರಿ ಅವರನ್ನು ಕೂಡ ವಿನಯ ಕುಲಕರ್ಣಿ ಅವರ ವಿಶೇಷ ಮುತುವರ್ಜಿ ಹಾಗೂ ಶಿಫಾರಸ್ಸಿ ನಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ಅವರ ನೇತೃತ್ವದಲ್ಲಿ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ನೂತನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಣೀಚನ್ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗರಾಜ ಗೌರಿ,ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೇಮಂತ ಗುರ್ಲಹೊಸೂರ, ನವನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹಣಮಂತ ಕೊರವರ ಸೇರಿದಂತೆ ಧಾರವಾಡ ಜಿಲ್ಲೆಯ ನೂರಾರು ಮುಖಂಡರು ಉಪಸ್ಥಿತರಿದ್ದರು.