BANGALORE:ಕಾರ್ಮಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಸಂತೋಷ್‌ ಲಾಡ್‌ ಸಭೆ

ಕಾರ್ಮಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಸಂತೋಷ್‌ ಲಾಡ್‌ ಸಭೆ
--------------------
ಬೆಂಗಳೂರು, ಆಗಸ್ಟ್‌ 7:  ಕಾರ್ಮಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮುಖ್ಯ ಕಚೇರಿಯಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಂಡಳಿಯ 42 ನೇ ಸಭೆ ನಡೆಸಿದರು. 
2024-25 ಸಾಲಿನ ಆಯವ್ಯಯ ಹಾಗೂ ಮಂಡಳಿಯ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಹಲವು ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ವಿಸ್ತೃತವಾಗಿ ಚರ್ಚೆ ನಡೆಸಿದರು. 
ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ
ಇದೇ ವೇಳೆ ಸಚಿವ ಸಂತೋಷ್‌ ಲಾಡ್‌ ಅವರು,  ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ  ನಡೆಸಿ ಕುಂದುಕೊರತೆಗಳನ್ನು ಆಲಿಸಿದರು. 

ಈ ಸಭೆಗಳಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ  ಮೊಹಮ್ಮದ್ ಮೊಹಸಿನ್, ಕಾರ್ಮಿಕ ಆಯುಕ್ತರಾದ  ಎಚ್ ಎನ್ ಗೋಪಾಲಕೃಷ್ಣ, ಮಂಡಳಿಯ ಸಿಇಒ ಹಾಗೂ ಕಾರ್ಯದರ್ಶಿಗಳಾದ  ಭಾರತಿ ಡಿ, ಇಲಾಖೆಯ ಇತರೆ ಅಧಿಕಾರಿಗಳು ಹಾಗೂ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ನವೀನ ಹಳೆಯದು

نموذج الاتصال