DHARWAD: ಸಂಘಟನಾತ್ಮಕ ಚಟುವಟಿಕೆಯಲ್ಲಿ ತೊಡಗಿರುವ ಕಾರ್ಯಕರ್ತರೇ ನಮ್ಮ ಶಕ್ತಿ- ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ

ಸಂಘಟನಾತ್ಮಕ ಚಟುವಟಿಕೆಯಲ್ಲಿ ತೊಡಗಿರುವ ಕಾರ್ಯಕರ್ತರೇ ನಮ್ಮ ಶಕ್ತಿ- ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ

ಧಾರವಾಡ 

ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭೂತಪೂರ್ವ ಗೆಲುವಿಗೆ ನಿಸ್ವಾರ್ಥವಾಗಿ ಶ್ರಮಿಸಿದ ನಮ್ಮ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ‌ ಸಲ್ಲಿಸುವ ವಿಶೇಷ ಕಾರ್ಯಕ್ರಮ ಇಂದು ಧಾರವಾಡದಲ್ಲಿ ನಡೆದಿದ್ದು, ಸಭೆಯಲ್ಲಿ ಭಾಗವಹಿಸಿದ ಕಾರ್ಯಕರ್ತರಿಗೆ ಸನ್ಮಾನಿಸಿ‌ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು  ಅಭಿನಂದಿಸಿದರು. 

ಧಾರವಾಡದ ಸಿ,ಎಸ,ಪಾಟೀಲ‌ ಸಭಾಭವನದಲ್ಲಿ ಕೇಂದ್ರ ಸಚಿವರ ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ,  ಧಾರವಾಡ 71 ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಅಭಿನಂದನಾ ಸಮರ್ಪಣಾ ಕಾರ್ಯಕ್ರಮ ಹಾಗೂ ಸದಸ್ಯತಾ ಅಭಿಯಾನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿ,
ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದರೆ ಅದಕ್ಕೆ ಕಾರಣ ಪಕ್ಷದ ತಳಮಟ್ಟದ ಕಾರ್ಯಕರ್ತರು. ಅಂತಹ ಕಾರ್ಯಕರ್ತರನ್ನು ಅಭಿನಂದಿಸಿ, ದೇಶಾದ್ಯಂತ ನಡೆಯುತ್ತಿರುವ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನ ಯಶಸ್ವಿಮಾಡಬೇಕೆಂದರು. 

ಈಗಾಗಲೇ ಧಾರವಾಡ ಲೋಕಸಭಾ ಕ್ಷೇತ್ರದಾದ್ಯಂತ ಸದಸ್ಯತ್ವ ಅಭಿಯಾನ ಭರದಿಂದ ನಡೆಯುತ್ತಿದ್ದು, ಪ್ರಧಾನಮಂತ್ರಿ ಶ್ರೀ Narendra Modi ಅವರ ವಿಕಸಿತ ಭಾರತದ ಸಂಕಲ್ಪವನ್ನು ಪೂರೈಸಲು‌ ನಾವೆಲ್ಲರೂ ಪಕ್ಷದ ಜವಾಬ್ದಾರಿಯಲ್ಲಿರುವ ಪ್ರತಿಯೊಬ್ಬರೂ ಕಾರ್ಯಕರ್ತರೊಂದಿಗೆ ಮನೆ‌ ಮನೆಗೆ ತೆರಳಿ ಸದಸ್ಯತ್ವ ಮಾಡುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮನವರಿಕೆ ಮಾಡಿದರು. 

 5 ಬಾರಿ ಬಿಜೆಪಿ ದಿಗ್ವಿಜಯಕ್ಕೆ ಕಾರಣ ಪ್ರತಿಯೊಬ್ಬ ಬೂತಮಟ್ಟದ ಕಾರ್ಯಕರ್ತರು. ಅವರ ಸತತ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ.  ಭಾರತೀಯ ಜನತಾ ಪಕ್ಷ ವಿಶ್ವದ ಅತಿದೊಡ್ಡ ಪಕ್ಷ ತಾವೆಲ್ಲರು ಒಗ್ಗೂಡಿ ಮನೆಮನೆಗೆ ತೆರಳಿ ಹೆಚ್ಚು ಸದಸ್ಯರನ್ನ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು. ಪ್ರತಿಯೊಬ್ಬರು ಕನಿಷ್ಠ 100 ಸದಸ್ಯರನ್ನ ಪಕ್ಷಕ್ಕೆ ಸೇರ್ಪಡೆಗೊಳಿಸಿ ಸಕ್ರಿಯ
 ಕಾರ್ಯಕರ್ತರಾಗಬೇಕು.ದೇಶ ನರೇಂದ್ರ ಮೋದಿಯವರ ನೇತೃತ್ವದಲ್ಲಿ ವಿಶ್ವಗುರುವಾಗುವ ನಿಟ್ಟಿನಲ್ಲಿ ದಾಪುಗಾಲು ಇಟ್ಟಿದ್ದು 2047ರಲ್ಲಿ ಭಾರತ ವಿಶ್ವಗುರುವಾಗುವದರಲ್ಲಿ ಯಾವದೆ ಸಂದೇಹವಿಲ್ಲ. ತಾವೆಲ್ಲರು ಪಕ್ಷವನ್ನ ಇನ್ನು ಬಲಪಡಿಸಿ ಮೋದಿಯವರ ಕೈಬಲಪಡಿಸಬೇಕೆಂದು ಕೇಂದ್ರ ಸಚಿವ ಜೋಶಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರು ಮಂಡಳ ಅಧ್ಯಕ್ಷರು ಹಾಗು ಮಹಿಳಾ ಕಾರ್ಯಕರ್ತರನ್ನ ಕೇಂದ್ರ ಸಚಿವರು ಪ್ರಲ್ಹಾದ ಜೋಶಿಯವರು ಸನ್ಮಾನಿಸಿ ಅಭಿನಂದಿಸಿ ಧನ್ಯವಾದಗಳು ಅರ್ಪಿಸಿದರು.
ಸಮಾರಂಭದಲ್ಲಿ ವಿಧಾನಪರಿಷತ ಸದಸ್ಯರಾದ ಎನ, ರವಿಕುಮಾರ ಎಸ.ವಿ. ಸಂಕನೂರ, ಮಾಜಿ ಶಾಸಕರಾದ ಅಮೃತ ದೇಸಾಯಿ, ಸೀಮಾ‌ಮಸೂತಿ, ಬಿಜೆಪಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಾಜಿಮಹಾಪೌರರಾದ ಈರೇಶ ಅಂಚಟಗೇರಿ,  ಕೆಎಂಎಫ ಅಧ್ಯಕ್ಷ ಶಂಕರ ಮುಗದ, ಮಂಡಳ ಅಧ್ಯಕ್ಷ ಸುನೀಲ ಮೋರೆ,  ರುದ್ರಪ್ಪ ಅರಿವಾಳ,  ಜಯತೀರ್ಥ ಕಟ್ಟಿ, ಸವಿತಾ ಅಮರಶೆಟ್ಟಿ,  ಗುರುನಾಥಗೌಡರ, ಸಂಗನಗೌಡ ರಾಮನಗೌಡರ, ಶ್ರೀನಿವಾಸ ಕೋಟ್ಯಾನ, ಹರೀಶ ಬಿಜಾಪುರ ಉಪಸ್ಥಿತರಿದ್ದರು.
ನವೀನ ಹಳೆಯದು

نموذج الاتصال