ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪದವೀಧರರ ಸಂಘ ಬೆಂಗಳೂರು ವತಿಯಿಂದ ವಸಂತ ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ವಿಧಾನಪರಿಷತ್
ವಿಪಕ್ಷ ನಾಯಕರಾದ ಶ್ರೀ ಛಲವಾದಿ
ನಾರಾಯಣಸ್ವಾಮಿ ಅವರಿಗೆ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್, ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಮತ್ತು ಸಮಾಜದ ಪೂಜ್ಯ ಸ್ವಾಮೀಜಿಗಳೆಲ್ಲರೂ ಭಾಗಿಯಾಗಿದ್ದರು,
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಗೋವಿಂದ ಕಾರಜೋಳ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ.
ರಾಜೀವ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್. ಮಹೇಶ್, ಶ್ರೀ ಆರ್ ರುದ್ರಯ್ಯ, ಮಾಜಿ ಸಂಸದರಾದ ಮುನಿಸ್ವಾಮಿ,
ಪಕ್ಷದ ಮುಖಂಡರು ಮತ್ತು ಪ್ರಮುಖರು ಉಪಸ್ಥಿತರಿದ್ದರು.