DHARWAD:ಸತ್ಯ, ಅಹಿಂಸೆ ಆಧಾರಿತ ಗಾಂಧೀ ಪ್ರಣಿತ ಭಾರತವೇ ನಮ್ಮ ಆದ್ಯತೆ:ಸಚಿವ ಸಂತೋಷ ಲಾಡ್*

*ಸತ್ಯ, ಅಹಿಂಸೆ ಆಧಾರಿತ ಗಾಂಧೀ ಪ್ರಣಿತ ಭಾರತವೇ ನಮ್ಮ ಆದ್ಯತೆ:ಸಚಿವ ಸಂತೋಷ ಲಾಡ್* 
*ಧಾರವಾಡ (ಕರ್ನಾಟಕ ವಾರ್ತೆ) ಅಕ್ಟೋಬರ್ 02:* ರಾಷ್ಟ್ರಪಿತ ಮಹಾತ್ಮಗಾಂಧೀ ಅವರು ನೀಡಿರುವ ಸತ್ಯ, ಅಹಿಂಸೆ ಆಧಾರಿತ ಗಾಂಧೀ ಪ್ರಣಿತ ಭಾರತವೇ ನಮ್ಮ ಆದ್ಯತೆ, ಗಾಂಧೀಜಿ ಅವರ ಜೀವನ ಮೌಲ್ಯಗಳು ನಮಗೆ ದಾರಿದೀಪವಾಗಿವೆ ಎಂದು ರಾಜ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಹೇಳಿದರು. 
ಅವರು ಇಂದು ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿಯವರ 155ನೇ ಜಯಂತಿ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜನ್ಮ ದಿನದ ನಿಮಿತ್ಯ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಮಾತನಾಡಿದರು.
 
ಮಹಾತ್ಮ ಗಾಂಧೀಜಿ ಅವರು ತಮ್ಮ ತತ್ವ ಸಿದ್ದಾಂತಗಳ ಮೂಲಕ ವಿಶ್ವದ ಅನೇಕ ರಾಷ್ಟ್ರಗಳಿಗೆ ಆದರ್ಶವಾಗುವಂತ ಆಡಳಿತ ವ್ಯವಸ್ಥೆ ಕಲ್ಪಿಸಿದ್ದಾರೆ. ಅವರ ರಾಜಕೀಯ ಪ್ರವೇಶ ಭಾರತ ಸ್ವಾತಂತ್ರ್ಯ ಚಳುವಳಿಯ ದಿಕ್ಕನ್ನೇ ಬದಲಿಸಿತು. ಅವರ ವ್ಯಕ್ತಿತ್ವ, ಆದರ್ಶಮಯ ಜೀವನಕ್ಕೆ ಮಾರು ಹೋದ ಅನೇಕರು ಅವರಂತೆ ನಾಡಿಗೆ ಮಡಿದರು ಎಂದು ಸಚಿವ ಸಂತೋಷ ಲಾಡ್ ತಿಳಿಸಿದರು. 
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶದ ಕೃಷಿ ಪದ್ಧತಿ, ರೈತರ ಬದುಕು ಸುಧಾರಣೆಗೆ ಕ್ರಮ ವಹಿಸಿದರು. ಜೈ ಜವಾನ್ ಜೈ ಕಿಸಾನ್ ಘೋಷನೆ ಮೂಲಕ ಬದಲಾವಣೆಗೆ ಕ್ರಮವಹಿಸಿದರು ಎಂದು ಅವರು ಹೇಳಿದರು. 

ಇಂದಿನ ಭಾರತಕ್ಕೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಮತ್ತು ಸಾಧನೆಗಳು ಅಗತ್ಯವಾಗಿವೆ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತೀಯ ಆಡಳಿತ ವ್ಯವಸ್ಥೆ ಗಾಂಧೀಜಿ ಅವರು ಬೋಧಿಸಿದ, ಅಳವಡಿಸಿಕೊಂಡು ಆಚರಿಸಿದ ತತ್ವ ಸಂದೇಶಗಳನ್ನು ಅನುಸರಿಸಿದೆ.  ಸತ್ಯ, ಹಿಂಸೆ, ಸಾಮರಸ್ಯ, ಸಹಬಾಳ್ವೆ ಮತ್ತು ಪರಸ್ಪರ ಪ್ರೀತಿ ವಿಶ್ವಾಸದ ಬದುಕಿಗೆ ಗಾಂಧೀಜಿ ಅವರ ಜೀವನ ಮೌಲ್ಯಗಳು ಮೂಲಭೂತ ಅಗತ್ಯವಾಗಿವೆ ಎಂದು ಹೇಳಿದರು. 

ಪೆÇಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು. ಗಾಂಧಿ ಚಿಂತಕ ಡಾ. ಸಂಜೀವ್ ಕುಲಕರ್ಣಿ ಅವರು ಮಹಾತ್ಮಾ ಗಾಂಧೀಜಿ ಅವರ ಜೀವನ ಸಂದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. 

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸ್ವಾಗತಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಅವರು ವಂದಿಸಿದರು. ಕಲಾವಿದ ರವಿ ಕುಲಕರ್ಣಿ ಅವರು ಕಾರ್ಯಕ್ರಮ ನಿರೂಪಿಸಿದರು. 

ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮದ ಸಂದೇಶವನ್ನು ಹಾಪೀಸ್ ರೆಹಮಾನ್ ಖಾದ್ರಿ, ಕ್ರಿಶ್ಚಿಯನ್ ಧರ್ಮದ ಸಂದೇಶವನ್ನು ರೆವರೆಂಡ್ ಸ್ಯಾಮುವೆಲ್ ಸಕ್ರಿ ಮತ್ತು ಹಿಂದೂ ಧರ್ಮದ ಸಂದೇಶವನ್ನು ಮಹೇಶ್ ಭಟ್ ಅವರು ಪ್ರಸ್ತುತ ಪಡಿಸಿ, ಸರ್ವಧರ್ಮ ಪ್ರಾರ್ಥನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಚಿವ ಸಂತೋಷ ಎಸ್ ಲಾಡ್ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಿದರು. ಉಪವಿಭಾಗಾಧಿಕಾರಿ ಶಾಲಂ ಹುಸೇನ ಅವರು ಸೇರಿದಂತೆ ಸಾರ್ವಜನಿಕರು ಹಾಗೂ ಅಧಿಕಾರಿಗಳು ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. 

ವೇದಿಕೆಯಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಹುಬ್ಬಳ್ಳಿ ಧಾರವಾಡ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಸ್. ಆರ್. ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ. ಶುಭಾ ಸೇರಿದಂತೆ ಇತರರು ಇದ್ದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಪಿ.ಸುರೇಶ, ತಹಶೀಲ್ದಾರ ಡಿ.ಎಚ್.ಹೂಗಾರ, ಕನ್ನಡ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಸೇರಿದಂತೆ ವಿವಿಧ ಅಧಿಕಾರಿಗಳು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಭಾಗವಹಿಸಿದ್ದರು. 

*ಗಾಂಧೀ ಪ್ರತಿಮೆಗೆ ಪುಷ್ರ್ಪಾಣೆ:* ಮಹಾತ್ಮ ಗಾಂಧೀಜಿ ಅವರ 155 ನೇ ಜಯಂತಿಯ ನಿಮಿತ್ಯ ವಾರ್ತಾ ಭವನದ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾಲಾರ್ಪಣೆ ಹಾಗೂ ಪುಷ್ರ್ಪಾಣೆ ಮಾಡಿ ನಮನ ಸಲ್ಲಿಸಿದರು. 

*ಗಾಂಧೀ ನಡಿಗೆ:* ವಾರ್ತಾ ಭವನದ ಮುಂಭಾಗದಲ್ಲಿರುವ ಗಾಂಧೀ ಪ್ರತಿಮೆಯಿಂದ ಗಾಂಧೀ ನಡಿಗೆಯನ್ನು ಆಯೋಜಿಸಲಾಗಿತ್ತು. ಗಾಂಧೀ ನಡಿಗೆಯು ಜಿಲ್ಲಾಧಿಕಾರಿಗಳ ಕಚೇರಿಯ ಮಾರ್ಗವಾಗಿ ಕೋರ್ಟ ಸರ್ಕಲ್, ಸರ್.ಎಂ.ವಿಶ್ವೇಶ್ವರಯ್ಯ ಸರ್ಕಲ್ ಮೂಲಕ ಆಲೂರ ವೆಂಕಟರಾವ್ ಭವನದವರೆಗೆ ಜರುಗಿತ್ತು. ಗಾಂಧೀ ನಡಿಗೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ವೇಷ ಭೂಷಣ ಧರಿಸಿದ್ದ ಶಾಲಾ ಮಕ್ಕಳು ಸಾರ್ವಜನಿಕರ ಗಮನ ಸೆಳೆದರು. ಗಾಂಧೀ ನಡಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರ ನೇತೃತ್ವದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. 
 
ಸ್ವಭಾವ ಸ್ವಚ್ಛತೆ ಸಂಸ್ಕಾರ ಸ್ವಚ್ಛತೆ ಪ್ರಶಸ್ತಿ: ಕೇಂದ್ರ ಪುರಸ್ಕøತ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛತೆಯೇ ಸೇವೆ ಅಭಿಯಾನದಡಿ, 14 ನೇ ಸೆಪ್ಟೆಂಬರ್ 2024 ರಿಂದ 1ನೇ ಅಕ್ಟೋಬರ್ 2024ರ ವರೆಗೆ ಸ್ವಭಾವ ಸ್ವಚ್ಛತೆ - ಸಂಸ್ಕಾರ ಸ್ವಚ್ಛತೆ ಎಂಬ ಕಾರ್ಯಕ್ರಮದಲ್ಲಿ ಸ್ವಚ್ಛತೆ, ನೈರ್ಮಲ್ಯ ಹಾಗೂ ಇನ್ನಿತರ ಐ.ಇ.ಸಿ ಕಾರ್ಯಕ್ರಮಗಳಲ್ಲಿ 08 ಘಟಕವಾರು ಅತ್ಯುತ್ತಮ ಕೊಡುಗೆಗಳನ್ನು ನೀಡಿದ ಧಾರವಾಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಯಿತು. 

*ಪ್ರಶಸ್ತಿ ವಿವರ:*
*ಸ್ವಚ್ಛತಾ ಕೀ ಭಾಗೀದಾರಿ:* ಪುರಸಭೆ ನವಲಗುಂದ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಅಳ್ಳಾವರ ಪಟ್ಟಣ ಪಂಚಾಯತ.
*ಸ್ವಚ್ಛತಾ ಲಕ್ಷ್ಮೀತ ಇಕಾಯಿ:* ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಪಟ್ಟಣ ಪಂಚಾಯತ ಕಲಘಟಗಿ, ಪುರಸಭೆ ನವಲಗುಂದ.
*ಸ್ವಚ್ಛ ಫುಟ್ ಸ್ಟ್ರೀಟ್ಸ್:* ಪುರಸಭೆ ನವಲಗುಂದ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಪುರಸಭೆ ಅಣ್ಣಿಗೇರಿ
*ವೇಸ್ಟ ಟು ಆರ್ಟ*: ಪಟ್ಟಣ ಪಂಚಾಯತ ಕುಂದಗೋಳ, ಪುರಸಭೆ ಅಣ್ಣಿಗೇರಿ, ಪುರಸಭೆ ನವಲಗುಂದ.
ಸಫಾಯಿ ಮಿತ್ರಾ ಸುರಕ್ಷಾ ಶಿವಿರ್: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಪುರಸಭೆ ನವಲಗುಂದ, ಪಟ್ಟಣ ಪಂಚಾಯತ ಅಳ್ಳಾವರ.
*ಬೇಸ್ಟ ಇನೊವೆಷನ್ ಅಂಡರ್ ಎಸ್.ಬಿ.ಎಂ:* ಪುರಸಭೆ ನವಲಗುಂದ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಪುರಸಭೆ ಅಣ್ಣಿಗೇರಿ
*ಪಬ್ಲಿಕ್ ಅಡ್ವೊಕಸಿ:* ಪುರಸಭೆ ನವಲಗುಂದ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಪಟ್ಟಣ ಪಂಚಾಯತ ಅಳ್ಳಾವರ
*ಪಾರ್ಟನರ್ಸ್ ಫಾರ್ ಎಸ್.ಎಚ್.ಎಸ್:* ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಪುರಸಭೆ ನವಲಗುಂದ, ಪಟ್ಟಣ ಪಂಚಾಯತ ಅಳ್ಳಾವರ.

*******
ನವೀನ ಹಳೆಯದು

نموذج الاتصال