DHARWAD: ಬಾಲ ವಿಕಾಸ ಅಕಾಡೆಮಿಯ ಕಾರ್ಯಕ್ರಮಗಳು ಶ್ಲಾಘನೀಯ*-ಸಚಿವ ಸಂತೋಷ್ ಲಾಡ್*

*ಬಾಲ ವಿಕಾಸ ಅಕಾಡೆಮಿಯ ಕಾರ್ಯಕ್ರಮಗಳು ಶ್ಲಾಘನೀಯ*-ಸಚಿವ ಸಂತೋಷ್ ಲಾಡ್* 
ಧಾರವಾಡ ಅ.2: ಕರ್ನಾಟಕ ಬಾಲವಿಕಾಸ ಅಕಾಡೆಮಿಯು  ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಹಲವಾರು  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಅಕಾಡೆಮಿಯ ಕಾರ್ಯಕ್ರಮಗಳು ಶ್ಲಾಘನೀಯವಾಗಿವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು. 
ಧಾರವಾಡದ ಹೊರವಲಯ ಹಳ್ಳಿಗೇರಿಯ ಸಮೀಪದಲ್ಲಿರುವ ನೇಚರ್ ಫಸ್ಟ್ ಇಕೋ ವಿಲೇಜ್ ನಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ರಾಜ್ಯದ ಬಾಲಮಂದಿರದ ಮಕ್ಕಳಿಗಾಗಿ  ಆಯೋಜಿಸಿರುವ ರಾಜ್ಯ ಮಟ್ಟದ ಕಥಾ ಕಮ್ಮಟ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ಬಾಲಮಂದಿರದ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.  ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರ ಕಾರ್ಯ ನಿಜಕ್ಕೂ ನನಗೆ ತೃಪ್ತಿಯನ್ನು ತಂದಿದೆ. ಅಕಾಡೆಮಿಯಿಂದ ಬಾಲ ಮಂದಿರದ ಮಕ್ಕಳಿಗಾಗಿ ಕೈಗೊಳ್ಳುವ ಕಾರ್ಯಕ್ರಮಗಳಿಗೆ ನಮ್ಮ ಫೌಂಡೇಶನ್ ವತಿಯಿಂದ ಸಹಕಾರ ನೀಡಲಾಗುವುದು. ಸಿಎಸ್‌‌ಆರ್ ನಿಧಿಯನ್ನು ಸಹ ಮಕ್ಕಳ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. 


ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ ಮಾತನಾಡಿ, ಬಾಲ ಮಂದಿರದ ಮಕ್ಕಳಿಗಾಗಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ರೂಪಿಸಿರುವ ಕಾರ್ಯಕ್ರಮದ ಉದ್ದೇಶ ಉತ್ತಮವಾಗಿದೆ. ಮಕ್ಕಳಿಗಾಗಿ ಕೆಲಸ ಮಾಡಲು  ಅಸ್ತಿತ್ವದಲ್ಲಿರುವ ಏಕೈಕ ಅಕಾಡೆಮಿ ನಮ್ಮೆಲ್ಲರ ಹೆಮ್ಮೆಯ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಾಗಿದೆ. ಸಂಗಮೇಶ ಅವರ ಮಕ್ಕಳ ಬಗೆಗಿನ ಕಾಳಜಿಯನ್ನು ನಾನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ತಿಳಿಸಿದರು. 


ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಮಾತನಾಡಿ, ಮಕ್ಕಳಿಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ನೋಡಿದಾಗ ನನಗೆ ತುಂಬಾ ಸಂತೋಷವಾಗುತ್ತದೆ. ಮಕ್ಕಳು ಇದರ ಪ್ರಯೋಜನ ಪಡೆದು ಎತ್ತರಕ್ಕೆ ಬೆಳೆಯಬೇಕು ಎಂದು ಹಾರೈಸಿದರು‌. 
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಮಾತನಾಡಿ, ಮಕ್ಕಳ ಸೇವೆ ಮಾಡಲು ನನಗೆ ಅವಕಾಶ ದೊರೆತಿದೆ. ಮಕ್ಕಳೆಂದರೆ ದೇವರ ಸಮಾನ. ಅವರ ಸೇವೆ ಮಾಡುವ ಅವಕಾಶ ನನಗೆ ದೊರೆತದ್ದು ನನ್ನ ಸೌಭಾಗ್ಯ ಎಂದರು. 


ಕಾರ್ಯಕ್ರಮದಲ್ಲಿ ಮುಖಂಡರಾದ ಎಸ.ಆರ್. ಪಾಟೀಲ, ಮಲ್ಲನಗೌಡ ಪಾಟೀಲ, ಬಸವರಾಜ್ ಮರಿತಮ್ಮನವರ, ಯೋಜನಾಧಿಕಾರಿ ಭಾರತಿ ಶೆಟ್ಟರ, ಉಪನಿರ್ದೇಶಕ ರತ್ನಾಕರ, ದೀಪಾ ಜಾವೂರ, ಹಳ್ಳಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ವಿವಿಧ 9  ಜಿಲ್ಲೆಗಳಿಂದ ಆಗಮಿಸಿದ ಮುದ್ದು ಮಕ್ಕಳು, ಸುತ್ತಲಿನ ಗ್ರಾಮಗಳ ಹಿರಿಯರು ಉಪಸ್ಥಿತರಿದ್ದರು.
*****
ನವೀನ ಹಳೆಯದು

نموذج الاتصال