DHARWAD:ಪರಶುರಾಮ ಕೋಟೂರು ರಾಷ್ಟ್ರಮಟ್ಟಕ್ಕೆ ಆಯ್ಕೆ.

ಪರಶುರಾಮ ಕೋಟೂರು ರಾಷ್ಟ್ರಮಟ್ಟಕ್ಕೆ ಆಯ್ಕೆ. 
      ಧಾರವಾಡ 22 : ಕರ್ನಾಟಕ ವಿಶ್ವವಿದ್ಯಾಲಯದ (ಬ್ಲೂ) ಕಬ್ಬಡ್ಡಿ ತಂಡಕ್ಕೆ ಮರಾಠ ವಿದ್ಯಾ ಪ್ರಸಾರಕ ಮಂಡಳದ ಛತ್ರಪತಿ ಶಿವಾಜಿ ಮಹಾರಾಜ ಕಲಾ-ವಾಣಿಜ್ಯ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ ಪರಶುರಾಮ ಕೋಟೂರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಮಿಳುನಾಡಿನ ಎಸ್.ಆರ್.ಎಂ. ವಿಶ್ವವಿದ್ಯಾಲಯದಲ್ಲಿ ನಡೆಯುವ  ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ತಂಡ ಪ್ರತಿನಿಧಿಸಲಿದ್ದು, ಈ ವಿದ್ಯಾರ್ಥಿಗೆ ಮರಾಠ ವಿದ್ಯಾ ಪ್ರಸಾರಕ ಮಂಡಳದ ಆಡಳಿತ ಮಂಡಳಿ ಪದಾಧಿಕಾರಿಗಳು, ಕಾಲೇಜಿನ ಪ್ರಾಚಾರ್ಯರು, ದೈಹಿಕ ನಿರ್ದೇಶಕರು, ಸಿಬ್ಬಂದಿ ಹಾಗೂ ಗೆಳೆಯರು ಅಭಿನಂದಿಸಿದ್ದಾರೆ.
ನವೀನ ಹಳೆಯದು

نموذج الاتصال