ಧಾರವಾಡ ದಸರಾ ಜಂಬೂಸವಾರಿ ಉತ್ಸವ ಸಮಿತಿಯ ವತಿಯಿಂದ ದಿನಾಂಕ 3-10-2024
ರಂದು ಗುರುವಾರ ರಂದು ವಿದ್ಯಾಗಿರಿ ಶ್ರೀ ಗಣೇಶ
ದೇವಸ್ಥಾನದಿಂದ ಪ್ರಾರಂಭವಾಗಿ ಶ್ರೀ ದುರ್ಗಾದೇವಿ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಕಲಾ ವಾದ್ಯ ಮೇಳಗಳೊಂದಿಗೆ ಸಾಂಸ್ಕೃತಿಕ ಕಲಾವಿದರೊಂದಿಗೆ ವಿಜೃಂಭಣೆಯಿಂದ ಸಾಗಿ ಗಾಂಧಿನಗರದ ಶ್ರೀ ಈಶ್ವರ ದೇವಸ್ಥಾನದಲ್ಲಿ ಶ್ರೀ ದುರ್ಗಾದೇವಿಗೆ ಪೂಜೆ ಸಲ್ಲಿಸಿ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಿ ರಾಜ್ಯ ಸುಭಿಕ್ಷೆಯಿಂದ ಸಮೃದ್ಧಿಯಾಗಲಿ ಎಂದು ಪ್ರಾರ್ಥನೆ ಮಾಡಿ ದೇವಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.
ದಸರಾ ಜಂಬೂ ಸವಾರಿ ಉತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಗುರುರಾಜ ಹುಣಸಿಮರದ ಅವರು ಮೆರವಣಿಗೆ ಉದ್ಘಾಟಿಸಿ ಮಾತನಾಡಿದ ಅವರು ಕಳೆದ ಇಪ್ಪತ್ತು ವರ್ಷಗಳಿಂದ ಧಾರವಾಡದಲ್ಲಿ ದಸರಾ ಜಂಬೂ ಸವಾರಿ ಉತ್ಸವ ಮೈಸೂರು ಬಿಟ್ಟರೆ ಉತ್ತರ ಕರ್ನಾಟಕದಲ್ಲಿ ಮೊಟ್ಟಮೊದಲು ಧಾರವಾಡದಲ್ಲಿ ಪ್ರಾರಂಭಿಸಿ ವಿದ್ಯಾ ಕಾಶಿ ಧಾರವಾಡದಲ್ಲಿ ಸಾಂಸ್ಕೃತಿಕ ಹಬ್ಬವನ್ನು ಜನತೆಯ ಸಹಕಾರ ದಿಂದ ಉತ್ಸವ ಸಮಿತಿ ಮಾಡುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹೆಚ್ಚು ಸಹಕಾರ ದೊರಕುವದಾದರೆ ಮೈಸೂರು ಮಾದರಿಯಲ್ಲಿ ಆಚರಿಸಲು ತಯಾರಿ ಮಾಡಿಕೊಳ್ಳುತ್ತೆವೆ ಎಂದರು.
ಈ ಸಂದರ್ಭದಲ್ಲಿ ಸಮಿತಿಯ ಮುಖಂಡರುಗಳಾದ ಶ್ರೀ ಮತಿ ಮಂಜುಳಾ ಮುಂಜಿ, ವಿಲಾಸ ತಿಬೇಲಿ, ಪಿ ಎಚ್ ಕಿರೇಸೂರ, ನಾರಾಯಣ ಕೋಪರ್ಡೆ ಮುಂತಾದವರು ಉಪಸ್ಥತಿರಿದ್ದರು.