ಕೆ.ಐ.ಎ.ಡಿ.ಬಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ.
ಧಾರವಾಡ:--ಇಲ್ಲಿಯ ಕೆ.ಐ.ಎ.ಡಿ.ಬಿ ಅಧಿಕಾರಿ ಮನೆ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಅವರ ಮನೆ ಸೇರಿದಂತೆ ಆರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಡಿವೈಎಸ್‌ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ಧಾರವಾಡದ ಗಾಂಧಿನಗರದಲ್ಲಿಯ ಮನೆ, ಸವದತ್ತಿ ತಾಲೂಕಿನ ಹೂಲಿ, ಉಗರಗೋಳದಲ್ಲಿಯ ಫಾರ್ಮಹೌಸ್, ತೇಜಸ್ವಿನಗರದ ಅಳಿಯನ ಮನೆ, ಲಕಮನಹಳ್ಳಿಯ ಕೆಐಎಡಿಬಿ ಕಚೇರಿ ಹಾಗೂ ನರಗುಂದದ ಸಹೋದರನ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.