ಬೆಂಗಳೂರ : ಧಾರವಾಡ ಗ್ರಾಮೀಣ ಕ್ಷೇತ್ರದ (71) ಶಾಸಕರಾದ ವಿನಯ್ ಕುಲಕರ್ಣಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯಕ್ಕೆ ಭೇಟಿ ಮಾಡಲಾಯಿತು.
ಈಗಾಗಲೇ ಧಾರವಾಡ ಜಿಲ್ಲಾಧಿಕಾರಿಗಳು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡುವ ಕಡತವನ್ನು ಅನುಮತಿಸಿದ್ದು, ಕಡತವನ್ನು ಎಚ್ ಡಿ ಎಮ್ ಸಿ ಸಿಬ್ಬಂದಿ ಪೌರಾಡಳಿತ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದಾರೆ. ವಿನಯ್ ಕುಲಕರ್ಣಿ ಅವರು ಸ್ವತಃ ನಿರ್ದೇಶಕರಿಗೆ ಭೇಟಿ ಮಾಡಿ ಮುಂದಿನ ಕ್ರಮ ಕೈಗೊಳ್ಳಲು ತಿಳಿಸಿದರು.
ವಿಧಾನಸೌಧದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರನ್ನು, ನಗರಾಭಿವೃದ್ಧಿ ಸಚಿವರಾದ , ಭೈರತಿ ಸುರೇಶ್ ರವರನ್ನು ಹಾಗೂ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರನ್ನು ವಿನಯ್ ಕುಲಕರ್ಣಿ ಅವರ ನೇತೃತ್ವದಲ್ಲಿ ಭೇಟಿಮಾಡಲಾಯಿತು,
ಭೇಟಿಯಲ್ಲಿ ಹು- ಧಾ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ರಾಜಶೇಖರ್ ಕಮತಿ, ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಅಭಿವೃದ್ಧಿ ವೇದಿಕೆಯ ಉಪಾಧ್ಯಕ್ಷರಾದ ವಿಠ್ಠಲ್ ಕಮ್ಮಾರ್, ಪ್ರಧಾನ ಕಾರ್ಯದರ್ಶಿ ರವಿಕುಮಾರ ಮಾಳಿಗೇರ, ಮುದೇನೂರು, ಕಾರ್ಪೊರೇಟರ್ ಪ್ರಕಾಶ ಘಾಟ್ಗೆ, ಮಾಜಿ ಮೇಯರ್ ದಾನಪ್ಪ ಕಬ್ಬೆರ್, ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ಅರವಿಂದ್ ಎಗನಗೌಡರ್, ವೀರಣ್ಣ ಶೆಟ್ಟರ್, ಶಕೀಲ್ ಇತರರು ಇದ್ದರು.