17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
ಧಾರವಾಡ 03 : ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನವತಿಯಿಂದ ಇಂದಿನಿಂದ ಎರಡು ದಿನಗಳ ಕಾಲ
ಆಯೋಜಿಸಲಾಗಿದ್ದ 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.
ಬೆಳಿಗ್ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ರಾಷ್ಟ್ರ್ರ ಧ್ವಜಾರೋಹಣ ನೆರವೇರಿಸಿದರು. ನಂತರ ವೇದಿಕೆಯ ಕಾರ್ಯಕ್ರಮವನ್ನು ಸಾಹಿತಿ ಡಾ.ಮೃತ್ಯುಂಜಯ ರುಮಾಲೆ ಉದ್ಘಾಟಿಸಿದರು.
ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ಎಸ್.ಆರ್.ಗುಂಜಾಳ, ಶಾಸಕ ಎನ್.ಎಚ್.ಕೊನರೆಡ್ಡಿ,
ಕಸಾಪ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ, ಪ್ರೋ ಮಾಲತಿ ಪಟ್ಟಣಶೆಟ್ಟಿ, ಬೇಂದ್ರೆ ಟ್ರಸ್ಟ್ ಅಧ್ಯಕ್ಷ ಡಿ.ಎಮ್. ಹಿರೇಮಠ, ಶಂಕರ ಹಲಗತ್ತಿ, ಸತೀಶ ತುರಮರಿ, ಶಾಂತವೀರ ಬೇಟಗೇರಿ, ಶಂಕರ ಕುಂಬಿ ಸೇರಿದಂತೆ ಹಲವಾರು ಸಾಹಿತಿಗಳು ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.