ಏಪ್ರಿಲ್ 30 ರಂದು ಶ್ರೀ ಬಸವೇಶ್ವರ ಜಯಂತಿ ಆಚರಣೆ*

*ಏಪ್ರಿಲ್ 30 ರಂದು ಶ್ರೀ ಬಸವೇಶ್ವರ ಜಯಂತಿ ಆಚರಣೆ*
*ಧಾರವಾಡ (ಕರ್ನಾಟಕ ವಾರ್ತೆ) ಏ.19:* ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಏಪ್ರಿಲ್ 30 ರಂದು ಸಂಜೆ 5 ಗಂಟೆಗೆ ಶ್ರೀ ಬಸವೇಶ್ವರ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.

  ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಸವೇಶ್ವರ ಜಯಂತಿ ಅಂಗವಾಗಿ ಏಪ್ರಿಲ್ 30 ರಂದು ಬೆಳಿಗ್ಗೆ 9 ಗಂಟೆಗೆ ಕಲಾಭವನ ಆವರಣದಲ್ಲಿರುವ ಶ್ರೀ ಬಸವೇಶ್ವರ ಪ್ರತಿಮೆಗೆ ಹಾಗೂ ಪಾಲಿಕೆ ಎದುರುಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಮಾರ್ಲಾಪಣೆ ಮಾಡಲಿದ್ದಾರೆ. ಉಳಚನ್ನಬಸವೇಶ್ವರ ಟ್ರಸ್ಟ್‍ವತಿಯಿಂದ ಬಸವೇಶ್ವರರ ಭಾವಚಿತ್ರದ ಮೆರವಣಿಗೆಯು ಬೆಳಿಗ್ಗೆ 10 ಗಂಟೆಗೆ ಶ್ರೀ ಉಳವಿಚನ್ನಬಸವೇಶ್ವರ ದೇವಸ್ಥಾನದಿಂದ ಆರಂಭವಾಗಿ ಕೆ.ಸಿ.ಸಿ ಬ್ಯಾಂಕ್ ಮಾರ್ಗವಾಗಿ ಮುರಘಾಮಠಕ್ಕೆ ತಲುಪಲಿದೆ. ನಂತರ ಅಲ್ಲಿಂದ ಮೆರಣಿಗೆಯು ಆಲೂರು ವೆಂಕಟರಾವ್ (ಜುಬ್ಲಿ) ವೃತ್ತದ ಮೂಲಕ ಉಳವಿಚನ್ನಬಸವೇಶ್ವರ ದೇವಸ್ಥಾನಕ್ಕೆ ಮರಳಿ ತಲುಪಲಿದೆ ಎಂದು ತಿಳಿಸಿದರು. 
ಶ್ರೀ ಬಸವೇಶ್ವರ ಜಯಂತಿಯ ವೇದಿಕೆ ಕಾರ್ಯಕ್ರಮವು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಸಂಜೆ 5 ಗಂಟೆಗೆ ಆರಂಭವಾಗಲಿದೆ. ವಚನ ಗಾಯನ, ವಿಶೇಷ ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು. 

 ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. 

ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿದ್ದರು.

****

ನವೀನ ಹಳೆಯದು

نموذج الاتصال