ಮಾಜಿ ಸಚಿವ ಹಾಗೂ ಧಾರವಾಡ -71 ಕಾಂಗ್ರೆಸ್ ಹಾಲಿ ಶಾಸಕ, ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ, ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ
ಆಗಿರುವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೊಮ್ಮೆ ತೀವ್ರ ಹಿನ್ನಡೆ ಆಗಿದೆ.
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಬಿಜೆಪಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪು ಪ್ರಶ್ನಿಸಿ
ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದರು.
ಸುಪ್ರೀಕೋರ್ಟ್ ವಿನಯ್ ಕುಲಕರ್ಣಿ ಸಲ್ಲಿಸಿದ ಅರ್ಜಿ ವಜಾಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ಯೋಗೀಶಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಫಿ ಸಾಕ್ಷಿ ಯನ್ನಾಗಿ
ಪರಿಗಣಿಸಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲು ಹತ್ತಿದ್ದ ವಿನಯ ಕುಲಕರ್ಣಿ ಅರ್ಜಿ ವಜಾಗೊಳಿಸಿ, ಹೈಕೋರ್ಟ್ ಕೂಡ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು.
ಇದೀಗ ಸುಪ್ರೀಂ ಕೋರ್ಟ್ ಕೂಡ ಬಸವರಾಜ ಮುತ್ತಗಿಯನ್ನು ಮಾಫಿಸಾಕ್ಷಿಯಾಗದಂತೆ ಕೋರಿದ್ದ ಅರ್ಜಿ ವಜಾಗೊಳಿಸಿರುವುದು ಮಾಜಿ ಸಚಿವ ವಿನಯ್ ಕುಲಕರ್ಣಿ ಗೆ ಬರುವ ದಿನಗಳಲ್ಲಿ ತೀವ್ರ ಕಂಟಕವಾಗಿ ಪರಿಣಮಿಸುವ ಸಾಧ್ಯತೆಯಿದೆ.
ಹೈಕೋರ್ಟ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಆದೇಶವನ್ನು ಪ್ರಶ್ನಿಸಿದ್ದ ವಿನಯ ಕುಲಕರ್ಣಿ ಸುಪ್ರೀಂ ಕೋರ್ಟ್ ಮೇಲೆ ಬಹಳ ಭರವಸೆಯನ್ನು ಹೊಂದಿದ್ದರು. ಇದೀಗ ಅವರಿಗೆ ತೀವ್ರ ನಿರಾಶೆಯಾದಂತಾಗಿದೆ.