KALGHATAGI :ಕಲಘಟಗಿ ತಾಲೂಕಿನ ವಿವಿಧ ಗ್ರಾಮಪಂಚಾಯತಿಗಳಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಭೇಟಿ; ಪರಿಶೀಲನೆ

 KALGHATAGI:ಗ್ರಾಮಪಂಚಾಯತಿಗಳಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಭೇಟಿ; ಪರಿಶೀಲನೆ* 

*ಧಾರವಾಡ (ಕರ್ನಾಟಕ ವಾರ್ತೆ) ಏ.02:* ಕಲಘಟಗಿ ತಾಲೂಕಿನ ಧುಮ್ಮವಾಡ ಗ್ರಾಮ ಪಂಚಾಯತಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಇಂದು (ಏ.02) ಬೆಳಿಗ್ಗೆ ಭೇಟಿ ನೀಡಿ, ಧುಮ್ಮವಾಡ ಗ್ರಾಮದ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿದ್ದ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.
 
ನಂತರ ಅವರು ಮಿಶ್ರಿಕೋಟಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಮಿಶ್ರಿಕೋಟಿ ಗ್ರಾಮದ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಮತ್ತು ಕೂಲಿ ಕಾರ್ಮಿಕರಿಗೆ ಸಿಹಿ ಹಂಚುವುದರ ಮೂಲಕ 2025-26ನೇ ಸಾಲಿನ ಆರ್ಥಿಕ ವರ್ಷವನ್ನು ಸ್ವಾಗತಿಸಿದರು.  
ನಂತರ ಮಧ್ಯಾಹ್ನ, ಕಲಘಟಗಿ ತಾಲೂಕಿನ ಸಂಗಮೇಶ್ವರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಕೂಡಲಗಿ ಗ್ರಾಮದ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿದರು. 

ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಅವರು ಕಲಘಟಗಿ ತಾಲೂಕಿನ ಧುಮ್ಮವಾಡ ಗ್ರಾಮ ಪಂಚಾಯತ ಸಭಾಭವನದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿಸಿ, ಸನ್ 2024-25 ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ  (ಒಉಓಖಇಉಂ) ಯೋಜನೆಯಲ್ಲಿ ಅತೀ ಕಡಿಮೆ ಸಾಧನೆ ಮಾಡಿರುವ ಗ್ರಾ. ಪಂ. ಗಳಾದ ದುಮ್ಮವಾಡ, ಗಳಗಿ, ಜಿ. ಬಸವನಕೊಪ್ಪ, ಕುರುವಿನಕೊಪ್ಪ, ದಾಸ್ತಿಕೊಪ್ಪ ಹಾಗೂ ಸಂಗಮೇಶ್ವರ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿಗಳಿಗೆ  ಹಾಗೂ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುವ ಟಿಇಎ ಅವರಿಗೆ ಕಾಲಮೀತಿಯಲ್ಲಿ ಅನುಮೋದಿತ ಕ್ರಿಯಾಯೋಜನೆಯ ಅನುಸಾರ ಕಾಮಗಾರಿಗಳನ್ನು ಕೈಗೊಂಡು ಪೂರ್ಣಪ್ರಮಾಣದ ಗುರಿ ಸಾಧಿಸಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ,  ಕಲಘಟಗಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ, ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ, ಹಾಗೂ ವಿವಿಧ ಗ್ರಾಮ ಪಂಚಾಯತಗಳ ಅಧ್ಯಕ್ಷರು, ಗ್ರಾಮ ಅಭಿವೃದ್ಧಿ ಅಧಿಕಾರಿ, ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುವ ಟಿಇಎ, ಟಿಸಿ, ಟಿಐಇಸಿ ಹಾಗೂ ಬಿಎಫ್‍ಟಿ ಸಿಬ್ಬಂದಿಗಳು ಹಾಜರಿದ್ದರು.
******


ನವೀನ ಹಳೆಯದು

نموذج الاتصال